Telegram Join My Telegram WhatsApp Join My WhatsApp

SSLC exam 2026: SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2026ರ SSLC ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ.?

SSLC exam 2026: SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2026ರ SSLC ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ.?

ಎಲ್ಲರಿಗೂ ನಮಸ್ಕಾರ..  ಕರ್ನಾಟಕ ರಾಜ್ಯದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಧಿಕೃತ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಹೌದು ಎಸ್ ಎಸ್ ಎಲ್ ಸಿ ಪರೀಕ್ಷೆ ಎಂದು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೊದಲ ಅತಿ ದೊಡ್ಡ ಪರೀಕ್ಷೆ ಇದಾಗಿದ್ದು ಮತ್ತು ಮುಂದಿನ ವಿದ್ಯಾಭ್ಯಾಸದ ಮೊದಲ ಹಂತ ಹತ್ತನೇ ತರಗತಿ ಹಾಗಿದ್ದು 2026ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ಧ ಆಗುತ್ತಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಧಿಕೃತ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ ಈ ಮಾದರಿ ಪ್ರಶ್ನೆ ಪತ್ರಿಕೆಗಳ ಅನುಕೂಲದಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಪಾಸ್ ಆಗಲು ಅನುಕೂಲ ಆಗಲಿದೆ. 


SSLC ಪರೀಕ್ಷೆ – ವಿದ್ಯಾರ್ಥಿಗಳ ಭವಿಷ್ಯದ ಮಹತ್ವದ ಹಂತ

SSLC (Secondary School Leaving Certificate) ಪರೀಕ್ಷೆ ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಹಾಗೂ ತಿರುವು ನೀಡುವ ಪರೀಕ್ಷೆಯಾಗಿದೆ. ಇದು ಸಾಮಾನ್ಯವಾಗಿ 10ನೇ ತರಗತಿ ಪೂರ್ಣಗೊಳಿಸಿದ ನಂತರ ನಡೆಸಲಾಗುತ್ತದೆ. ಕರ್ನಾಟಕದಲ್ಲಿ ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನಲ್ಲಿ ಇದು ಮೊದಲ ಸಾರ್ವಜನಿಕ ಪರೀಕ್ಷೆಯಾಗಿದ್ದು, ಮುಂದಿನ ಶಿಕ್ಷಣದ ದಿಕ್ಕನ್ನು ನಿರ್ಧರಿಸುವ ಪ್ರಮುಖ ಹಂತವಾಗಿದೆ.

SSLC ಪರೀಕ್ಷೆಯು ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ, ವಿಷಯ ಜ್ಞಾನ, ಶಿಸ್ತು ಮತ್ತು ಸಮಯ ನಿರ್ವಹಣಾ ಕೌಶಲ್ಯಗಳನ್ನು ಪರೀಕ್ಷಿಸುತ್ತದೆ. ಕನ್ನಡ, ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಸೇರಿದಂತೆ ಹಲವು ವಿಷಯಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಈ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳು ಪಿಯುಸಿ, ಐಟಿಐ, ಡಿಪ್ಲೋಮಾ ಅಥವಾ ಇತರ ವೃತ್ತಿಪರ ಶಿಕ್ಷಣ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಪರೀಕ್ಷೆಗೆ ತಯಾರಿ ಮಾಡುವಾಗ ವಿದ್ಯಾರ್ಥಿಗಳು ನಿಯಮಿತ ಅಧ್ಯಯನ, ಪುನರವಲೋಕನ ಮತ್ತು ಮಾದರಿ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಮಾಡುವುದು ಅತ್ಯಂತ ಅಗತ್ಯ. ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ನೀಡಬೇಕು. ಅತಿಯಾದ ಒತ್ತಡದಿಂದ ದೂರವಿದ್ದು, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವುದು ಮುಖ್ಯ. ಸಮಯಕ್ಕೆ ಸರಿಯಾಗಿ ಓದು ಮುಗಿಸಿ, ಆರೋಗ್ಯಕ್ಕೂ ಗಮನ ಕೊಡಬೇಕು.

SSLC ಪರೀಕ್ಷೆ ಕೇವಲ ಅಂಕಗಳಿಗಾಗಿ ಮಾತ್ರವಲ್ಲ, ಜೀವನದಲ್ಲಿ ಶ್ರಮ, ಶಿಸ್ತು ಮತ್ತು ಹೊಣೆಗಾರಿಕೆ ಕಲಿಸುವ ಪರೀಕ್ಷೆಯೂ ಹೌದು. ಈ ಹಂತವನ್ನು ಯಶಸ್ವಿಯಾಗಿ ದಾಟಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಹೆಚ್ಚಿನ ಸಾಧನೆ ಮಾಡಲು ಪ್ರೇರೇಪಿತರಾಗುತ್ತಾರೆ. ಆದ್ದರಿಂದ SSLC ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ, ಧೈರ್ಯದಿಂದ ಮತ್ತು ಸಕಾರಾತ್ಮಕ ಮನೋಭಾವದಿಂದ ಎದುರಿಸಬೇಕು. ಯಶಸ್ಸು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದಲೇ ಸಾಧ್ಯ.

2026ರ SSLC ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ.?

ಈಗಾಗಲೇ ತಿಳಿಸಿದ ಹಾಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಮಹತ್ವದ ಅಂತ ಆಗಿದ್ದು ಈ ಪರೀಕ್ಷೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಅತಿ ಹೆಚ್ಚು ಅಂಕಗಳನ್ನು ಗಳಿಸಲು ಹೆಚ್ಚಿಸುತ್ತಾರೆ ಮತ್ತು ಇದು ಅವರ ಜೀವನದ ಮೊದಲ ಪಬ್ಲಿಕ್ ಪರೀಕ್ಷೆ ಆದ ಕಾರಣ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಭಯ ಇದ್ದೆ ಇರುತ್ತದೆ ಹಾಗಾಗಿ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಪಾಸ್ ಆಗುವ ಅವಕಾಶವನ್ನು ನೀಡಲು ಮತ್ತು ಪರೀಕ್ಷೆಗೆ ಸರಿಯಾದ ರೀತಿಯಲ್ಲಿ ಸಿದ್ದರಾಗಲು ಇಲಾಖೆಯಿಂದ ಅಧಿಕೃತ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗುತ್ತದೆ ಅದೇ ರೀತಿ ಇದೀಗ 2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ  ಮಾಡಲಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷಾ ವಿಧಾನದಲ್ಲಿ ಕೆಲವು ಹೊಸ ಬದಲಾವಣೆ.

 ಹೌದು ಪ್ರತಿ ವರ್ಷದ ಪರೀಕ್ಷೆಯಲ್ಲೂ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಕೆಲವು ಹೊಸ ಹೊಸ ಬದಲಾವಣೆಗಳನ್ನು ತರಲಾಗುತ್ತದೆ ಅದೇ ರೀತಿ 2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷ ವಿದ್ಯಾರ್ಥಿಗಳಿಗೂ ಪರೀಕ್ಷಾ ವಿಧಾನದಲ್ಲಿ ಕೆಲವು ಹೊಸ ಬದಲಾವಣೆಗಳನ್ನು ತರಲಾಗಿದೆ ಇದು ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲು ಶಿಕ್ಷಣ ಇಲಾಖೆ ತಂದಿರುವ ಬದಲಾವಣೆಗಳಾಗಿದ್ದು.  ವಿದ್ಯಾರ್ಥಿಗಳಿಗೆ ಪರೀಕ್ಷಾ ಪದ್ಧತಿಯಲ್ಲಿ ಮೂರು ಹಂತಗಳನ್ನು ಜಾರಿಗೆ ತರಲಾಗಿದೆ ವಿದ್ಯಾರ್ಥಿಗಳು ಮೂರು ಹಂತದಲ್ಲಿ ಪರೀಕ್ಷೆಗಳನ್ನು ಬರೆಯುವ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಪಾಸ್ ಮಾಡಬಹುದಾಗಿದೆ ಇದರಲ್ಲಿ ಯಾವ ಹಂತದಲ್ಲಿ ಅತಿ ಹೆಚ್ಚು ಅಂಕವನ್ನು ಗಳಿಸುತ್ತಾರೋ ಅದನ್ನೇ ಫೈನಲ್ ಅಂಕಪಟ್ಟಿಗೆ ಪರಿಗಣಿಸಲಾಗುತ್ತದೆ.

 ಈ ಹೊಸ ನಿಯಮದಿಂದ ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತದೆ ಮೊದಲಬಾರಿ ಹಂಕಗಳು ಕಡಿಮೆ ಬಂದರು ಮುಂದಿನ ಪರೀಕ್ಷೆಯಲ್ಲಿ ಅದನ್ನು ಸುಧಾರಿಸಿಕೊಳ್ಳಲು ಉತ್ತಮ ಅವಕಾಶ ನೀಡಲಾಗಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಇದು ಪೂರಕ ನಿರ್ಧಾರವಾಗಿದೆ.  ಇನ್ನು ಈಗಾಗಲೇ ಪ್ರಸ್ತುತಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು ಮಾರ್ಚ್ 20 ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು ಅಧಿಕೃತ ಅಂತಿಮ ವೇಳಾಪಟ್ಟಿಯಲ್ಲಿ ಸಣ್ಣಬದಲಾವಣೆಗಳು ಆಗುವ ಸಾಧ್ಯತೆ ಇದೆ. 

ಎಸ್ ಎಸ್ ಎಲ್ ಸಿ ಮಾದರಿ ಪ್ರಶ್ನೆ ಪತ್ರಿಕೆ ಡೌನ್ಲೋಡ್ ಮಾಡುವುದು ಹೇಗೆ.?

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲ  ಆಗಲು ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿರುವ 2026 ನೇ ಸಾಲಿನ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿ ಕೊಳ್ಳುವ ಮೂಲಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬಹುದಾಗಿದೆ ಈ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀವು ನಿಮ್ಮ ಮೊಬೈಲ್ ನಲ್ಲಿಯೇ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬಹುದಾಗಿದ್ದು ಮಾದರಿ ಪ್ರಶ್ನೆ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಮಾದರಿ ಪ್ರಶ್ನೆ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ https://kseeb.karnataka.gov.in/QP2026/SSLC2025-26MODEL_QP?open-reg ಮಾಡುವ ಮೂಲಕ ನೇರವಾಗಿ ಎಸ್ ಎಸ್ ಎಲ್ ಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಧನ್ಯವಾದಗಳು..