Telegram Join My Telegram WhatsApp Join My WhatsApp

Free sewing machine scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ.!  ಈಗಲೇ ಅರ್ಜಿ ಸಲ್ಲಿಸಿ?

Free sewing machine scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ.! 

ನಮಸ್ಕಾರ ಎಲ್ಲರಿಗೂ.. ಮಹಿಳೆಯರ ಸಬಲೀಕರಣಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರದಿಂದ ಮತ್ತು ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಅಂತಹ ಯೋಜನೆಗಳಲ್ಲಿ ಈ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡುವ ಯೋಜನೆ ಕೂಡ ಒಂದಾಗಿದೆ. ಸದ್ಯ ಕರ್ನಾಟಕ ರಾಜ್ಯ ಸರ್ಕಾರದಿಂದ ಈಗಾಗಲೇ ಮಹಿಳೆಯರಿಗಾಗಿ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಕೆಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಕಳೆದ 2023ರ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವು ನೀಡಿದ್ದ ಗ್ಯಾರಂಟಿ ಯೋಜನೆಯ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಕೂಡ ಆಗಿದೆ ಸದ್ಯ ಇದೀಗ ಪ್ರತಿ ವರ್ಷವೂ ಕೇಂದ್ರ ಸರ್ಕಾರದಿಂದ ಗ್ರಾಮೀಣ ಮಹಿಳೆಯರಿಗೆ ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಬಯಸುವವರಿಗೆ ಒಂದು ಅವಕಾಶವನ್ನು ನೀಡಲಾಗುತ್ತಿದ್ದು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ ಮತ್ತು ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದ್ದು ಇದೀಗ 2026ನೇ ಸಾಲಿನ ಉಚಿತ ಅಲ್ಲಿಗೆ ಯಂತ್ರ ವಿತರಣೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ – ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ

ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆವು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವಾವಲಂಬನೆ ಮತ್ತು ಸ್ವ ಉದ್ಯೋಗದ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಮತ್ತು ಕೆಲ ಸಾಮಾಜಿಕ ಸಂಸ್ಥೆಗಳು ಜಾರಿಗೆ ತಂದಿರುವ ಮಹತ್ವದ ಯೋಜನೆಯಾಗಿದೆ. ವಿಶೇಷವಾಗಿ ಗ್ರಾಮೀಣ ಹಾಗೂ ಬಡ ವರ್ಗದ ಮಹಿಳೆಯರು ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಲು ಮತ್ತು ಸ್ವತಂತ್ರ ಜೀವನ ನಡೆಸಲು ಈ ಯೋಜನೆ ಬಹಳ ಸಹಾಯಕವಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ ಮಹಿಳೆಯರಿಗೆ ಕೌಶಲ್ಯ ಆಧಾರಿತ ಉದ್ಯೋಗವನ್ನು ಒದಗಿಸುವುದು. ಅನೇಕ ಮಹಿಳೆಯರು ಹೊಲಿಗೆ ಕೆಲಸದಲ್ಲಿ ನೈಪುಣ್ಯ ಹೊಂದಿದ್ದರೂ, ಯಂತ್ರಗಳ ಕೊರತೆಯಿಂದ ತಮ್ಮ ಪ್ರತಿಭೆಯನ್ನು ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಉಚಿತ ಹೊಲಿಗೆ ಯಂತ್ರ ದೊರೆತರೆ ಅವರು ಮನೆಮಾತಾಗಿ ಬಟ್ಟೆ ಹೊಲಿಗೆ, ಅಲ್ಟರೇಷನ್, ಯೂನಿಫಾರ್ಮ್ ಹೊಲಿಗೆ ಮುಂತಾದ ಕೆಲಸಗಳನ್ನು ಮಾಡಿ ಆದಾಯ ಗಳಿಸಬಹುದು. ಇದರಿಂದ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.

ಸಾಮಾನ್ಯವಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವು ಅರ್ಹತೆಗಳಿರುತ್ತವೆ. ಅರ್ಜಿದಾರ್ತಿ ಮಹಿಳೆ ಭಾರತೀಯ ನಾಗರಿಕೆಯಾಗಿರಬೇಕು, ವಯಸ್ಸು ಸಾಮಾನ್ಯವಾಗಿ 20 ರಿಂದ 40 ಅಥವಾ 45 ವರ್ಷಗಳ ನಡುವೆ ಇರಬೇಕು. ಕುಟುಂಬದ ವಾರ್ಷಿಕ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿಯೊಳಗಿರಬೇಕು. ಕೆಲ ಸಂದರ್ಭಗಳಲ್ಲಿ ವಿಧವೆಯರು, ಅಂಗವಿಕಲ ಮಹಿಳೆಯರು ಮತ್ತು ಬಡ ವರ್ಗದ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.

ಈ ಯೋಜನೆಯ ಮತ್ತೊಂದು ವಿಶೇಷತೆ ಎಂದರೆ ಕೆಲವೆಡೆ ಹೊಲಿಗೆ ತರಬೇತಿಯನ್ನೂ ನೀಡಲಾಗುತ್ತದೆ. ತರಬೇತಿ ಪಡೆದ ಮಹಿಳೆಯರು ಉತ್ತಮ ಗುಣಮಟ್ಟದ ಕೆಲಸ ಮಾಡಿ ಹೆಚ್ಚು ಆದಾಯ ಗಳಿಸಬಹುದು. ಕೆಲವರು ತಮ್ಮದೇ ಹೊಲಿಗೆ ಕೇಂದ್ರ ಆರಂಭಿಸಿ ಇತರರಿಗೆ ಉದ್ಯೋಗಾವಕಾಶಗಳನ್ನು ಕೂಡ ಸೃಷ್ಟಿಸುತ್ತಾರೆ.

ಒಟ್ಟಾರೆ, ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ಆರ್ಥಿಕ ಅಭಿವೃದ್ಧಿಗೂ ನೆರವಾಗುತ್ತದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಇಂತಹ ಯೋಜನೆಗಳು ಮಹತ್ವದ ಪಾತ್ರವಹಿಸುತ್ತವೆ. ಆದ್ದರಿಂದ ಅರ್ಹ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದು ತಮ್ಮ ಜೀವನಮಟ್ಟವನ್ನು ಕೊಡಬಹುದಾಗಿದೆ.

ಉಚಿತ ಹೋಲಿಗೆ ಯಂತ್ರ ಪಡೆಯುವುದು ಹೇಗೆ.?

ಈಗಾಗಲೇ ತಿಳಿಸಿದ ಹಾಗೆ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತು ಗ್ರಾಮೀಣ ಭಾಗದಲ್ಲಿ ತಮ್ಮದೇ ಸ್ವಂತ ಉದ್ಯೋಗ ಪ್ರಾರಂಭ ಮಾಡುವ ಆಸೆ ಹೊಂದಿರುವಂತಹ ಮಹಿಳೆಯರಿಗಾಗಿ ಈ ಯೋಜನೆಯನ್ನು ಮಾಡಲಾಗಿದ್ದು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಸರ್ಕಾರದಿಂದ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನಮ್ಮ ದೇಶದಲ್ಲಿ ವಂಶ ಪಾರಂಪರಿಕವಾಗಿ ನಡೆಸಿಕೊಂಡು ಬಂದಿರುವಂತಹ ವೃತ್ತಿಗಳನ್ನು ಮತ್ತು ಕೈಗಾರಿಕೆಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಹಾಗೂ ಆಧುನಿಕ ಕ್ಷೇತ್ರಗಳಲ್ಲಿ ಅವುಗಳಿಗೆ ಒಳ್ಳೆಯ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಅರ್ಜಿದಾರರಿಗೆ ಉಚಿತವಾಗಿ ಕೌಶಲ್ಯ ತರಬೇತಿ ಮತ್ತು ಉಚಿತ ಹೊಲಿಗೆ ಯಂತ್ರ ಮತ್ತು ಸರ್ಕಾರದಿಂದ ಸಾಲ ಸೌಲಭ್ಯವನ್ನು ಕೂಡ ಒದಗಿಸಲಾಗುತ್ತಿದೆ.

 ಹೌದು  ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಏಳು ದಿನಗಳ ಉಚಿತ ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ಫಲಾನುಭವಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡುವುದರ ಜೊತೆಗೆ ಫಲಾನುಭವಿಗಳಿಗೆ ಉಚಿತವಾಗಿ ಕಿಟ್ ಗಳನ್ನು ಕೂಡ ನೀಡಲಾಗುತ್ತದೆ ಇನ್ನು ಈಗಾಗಲೇ ಹೇಳಿದ ಹಾಗೆ ಸ್ವಂತ ಉದ್ಯೋಗವನ್ನು ಆರಂಭಿಸಬೇಕು ಎಂಬ ಕನಸು ಹೊಂದಿದ್ದರೆ ಅರ್ಜಿ ಸಲ್ಲಿಸಿ ಸರ್ಕಾರದಿಂದ ಸೌಲಭ್ಯ ಪಡೆದ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಕೂಡ ಒದಗಿಸಲಾಗುತ್ತದೆ.

ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು. 

ಸಾಮಾನ್ಯವಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವು ಅರ್ಹತೆಗಳಿರುತ್ತವೆ. ಅರ್ಜಿದಾರ್ತಿ ಮಹಿಳೆ ಭಾರತೀಯ ನಾಗರಿಕೆಯಾಗಿರಬೇಕು, ವಯಸ್ಸು ಸಾಮಾನ್ಯವಾಗಿ 20 ರಿಂದ 40 ಅಥವಾ 45 ವರ್ಷಗಳ ನಡುವೆ ಇರಬೇಕು. ಕುಟುಂಬದ ವಾರ್ಷಿಕ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿಯೊಳಗಿರಬೇಕು. ಕೆಲ ಸಂದರ್ಭಗಳಲ್ಲಿ ವಿಧವೆಯರು, ಅಂಗವಿಕಲ ಮಹಿಳೆಯರು ಮತ್ತು ಬಡ ವರ್ಗದ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.

  • ಅರ್ಜಿಗಾಗಿ ಆಧಾರ್ ಕಾರ್ಡ್, 
  • ಆದಾಯ ಪ್ರಮಾಣ ಪತ್ರ, 
  • ವಯಸ್ಸಿನ ಪ್ರಮಾಣ ಪತ್ರ, 
  • ನಿವಾಸ ಪ್ರಮಾಣ ಪತ್ರ ಮತ್ತು ಪಾಸ್‌ಪೋರ್ಟ್ ಗಾತ್ರದ ಫೋಟೋ ಅಗತ್ಯವಿರುತ್ತದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಅಥವಾ ಸಂಬಂಧಿಸಿದ ಇಲಾಖೆಯ ಕಚೇರಿಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿಗಳು ಪರಿಶೀಲನೆಯಾದ ನಂತರ ಅರ್ಹರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತದೆ.

ಪಿಎಂ ವಿಶ್ವಕರ್ಮ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://pmvishwakarma.gov.in